Ration Card application: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಈ ದಾಖಲಾತಿಗಳು ಬೇಕು
ನಮಸ್ಕಾರ ಸ್ನೇಹಿತರೆ ನೀವು ರೇಷನ್ ಕಾರ್ಡ್ ಬಯಸುತ್ತಿದ್ದೀರಾ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುತಿದ್ದೀರಾ ಹಾಗಾದರೆ ನಿಮಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ ಇದೀಗ ರಾಜ್ಯ ಸರ್ಕಾರ ಆಹಾರ ಇಲಾಖೆಯ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿತ್ತು ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನ ಕೊನೆವರೆಗೂ ಓದಿ
ಪೋಸ್ಟ್ ಆಫೀಸ್ ನಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗ ಅವಕಾಶ ಈ ರೀತಿ ಅರ್ಜಿ ಸಲ್ಲಿಸಿ
ರೇಷನ್ ಕಾರ್ಡ್ (Ration Card application)..?
ರೇಷನ್ ಕಾರ್ಡ್ ಇವತ್ತಿನ ದಿನ ಈ ಒಂದು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಸರಕಾರದ ಹಲವಾರು ಯೋಜನೆಗಳ ಲಾಭ ಪಡೆಯಬಹುದು ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ 5 ಗ್ಯಾರಂಟಿ ಯೋಜನೆಗಳಿಂದ ಲಾಭ ಪಡೆಯಬಹುದಾಗಿದೆ ಹಾಗಾಗಿ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಇದೀಗ ಸುದೀರ್ಘವಾಗಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ.! ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ ಹಾಗೂ ಯಾವ ಬದಲಾವಣೆ ಮಾಡಲು ಅವಕಾಶವಿದೆ ಇದೆ ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತೆಗೆದುಕೊಳ್ಳೋಣ
(Ration Card application) ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ..?
ಸ್ನೇಹಿತರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿದ್ದು ಜನವರಿ 31 2025 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ.! ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ತಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡಬಹುದು ಹಾಗೂ ಇತರ ಹಲವಾರು ಕೆಲಸವನ್ನು ಈ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ.!
ಹೌದು ಸ್ನೇಹಿತರೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:30 ರ ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ದಿನಾಂಕ 31 ಜನವರಿ 2025 ರ ಒಳಗಡೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ..!
ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಏನು ಬದಲಾವಣೆ ಮಾಡಬಹುದು (Ration Card application).?
- ಕುಟುಂಬದ ಮುಖ್ಯಸ್ಥರ ಬದಲಾವಣೆ
- ರೇಷನ್ ಕಾರ್ಡ್ ವಿಳಾಸದ ಬದಲಾವಣೆ
- ಕುಟುಂಬದ ಹೊಸ ಸದಸ್ಯರ ಸೇರ್ಪಡೆ ಮಾಡಲು ಅವಕಾಶ
- ನ್ಯಾಯಬೆಲೆ ಅಂಗಡಿ ಬದಲಾವಣೆ ಮಾಡಲು ಅವಕಾಶ
- ಕುಟುಂಬದ ಸದಸ್ಯರನ್ನು ತೆಗೆದುಹಾಕಲು ಅವಕಾಶವಿದೆ
- ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ E-kyc ಮಾಡಲು ಅವಕಾಶ
- ರೇಷನ್ ಕಾರ್ಡ್ ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅವಕಾಶ
- ರೇಷನ್ ಕಾರ್ಡ್ ನಲ್ಲಿ ಇತರ ಎಲ್ಲಾ ಬದಲಾವಣೆ ಮಾಡಲು ಈ ಒಂದು ತಿದ್ದುಪಡಿಯಲ್ಲಿ ಅವಕಾಶವಿದೆ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಮಕ್ಕಳ ಜನನ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರಗಳು
- ಇತರ ಅಗತ್ಯ ದಾಖಲಾತಿಗಳು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ..?
ಸ್ನೇಹಿತರ ಕೆಲವೊಂದು ಸಂದರ್ಭಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಡುತ್ತದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಅವಕಾಶ ಮಾಡಿಕೊಡುತ್ತದೆ ಎಂಬ ಸ್ಪಷ್ಟ ಮಾಹಿತಿ ಗೊತ್ತಿರುವುದಿಲ್ಲ ಆದ್ದರಿಂದ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಈ ರೇಷನ್ ಕಾರ್ಡ್ ತಿದ್ದುಪಡಿ ಮುಗಿದ ನಂತರ ಅವಕಾಶ ಮಾಡಿಕೊಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ನಾವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಬಿಟ್ಟಾಗ ಮತ್ತೊಂದು ಲೇಖನ ಮೂಲಕ ಮಾಹಿತಿ ನೀಡುತ್ತೇವೆ ಮತ್ತು ಇದೇ ರೀತಿ ಮಾಹಿತಿಗಾಗಿ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನಲ್ಗಳಿಗೆ ಜಾಯಿನ್ ಆಗಬಹುದು