Anganwadi Recruitment: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದಂತ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ನಮ್ಮ ರಾಜ್ಯದ ಈ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಈ ಒಂದು ಲೇಖನ ಮೂಲಕ ಯಾವ ಜಿಲ್ಲೆಯಲ್ಲಿ ಉದ್ಯೋಗ ಕಾಲಿ ಇದೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ (Anganwadi Recruitment).?
ಅದು ಸ್ನೇಹಿತರೆ ನಮ್ಮ ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ಸುಮಾರು 219 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವಂತಹ ಮಹಿಳಾ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7 ಫೆಬ್ರವರಿ 2025 ಆಗಿದೆ.!
ಹೌದು ಸ್ನೇಹಿತರೆ ಈ ಒಂದು ಲೇಖನ ಮೂಲಕ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಸಂಬಳ ಎಷ್ಟು ಎಂಬ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗೂ ಈ ಹುದ್ದೆಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ನೇಮಕಾತಿ ವಿವರ (Anganwadi Recruitment).?
ನೇಮಕಾತಿ ಇಲಾಖೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:: 219 ಹುದ್ದೆಗಳು
ಹುದ್ದೆಗಳ ವಿವರ:-
1) ಅಂಗನವಾಡಿ ಕಾರ್ಯಕರ್ತೆ 77 ಹುದ್ದೆಗಳು
2) ಅಂಗನವಾಡಿ ಸಹಾಯಕಿ 142 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 09/01/2025
ಅರ್ಜಿ ಕೊನೆಯ ದಿನಾಂಕ:- 07/02/2025
ಉದ್ಯೋಗ ಸ್ಥಳ:- ಚಾಮರಾಜನಗರ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ 219 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಾರ್ಯಕರ್ತ ಹುದ್ದೆಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸ್ ಆಗಿರಬೇಕು ಅಂತ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- 219 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಅಭ್ಯರ್ಥಿಗಳು ಕನಿಷ್ಠ 19 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಮೀರಬಾರದು ಮತ್ತು ಪಿ ಡಬ್ಲ್ಯೂ ಡಿ ಹಾಗೂ ವಿಧವಾ ಮಹಿಳೆಯರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರಿಗೆ 5 ವರ್ಷ ವಯೋಮಿತಿ ಸಡಿಲಿಕ್ಕೆ ಮಾಡಲಾಗಿದೆ
ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗಾಗಿ ಈ ಒಂದು ಹುದ್ದೆಗಳಿಗೆ ಮಹಿಳೆಯರು ಉಚಿತವಾಗಿ ಅರ್ಜಿ ಸಲ್ಲಿಸಬಹುದು
ಆಯ್ಕೆಯ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಮಹಿಳಾ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅಂದರೆ ತಾವು ಇಂದಿನ ತರಗತಿಯಲ್ಲಿ ಎಷ್ಟು ಅಂಕಗಳು ಗಳಿಸಿದ್ದಾರೆ ಎಂದು ಪರಿಗಣಿಸಿ ಹಾಗೂ ಹೆಚ್ಚು ಅಂಕ ಪಡೆದವರನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಮಹಿಳೆಯರಿಗೆ ತಿಂಗಳಿಗೆ 8,000 ಇಂದ ಗರಿಷ್ಠ 15 ಸಾವಿರ ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ 219 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಾವು ಕೆಳಗಡೆ ನೀಡಿರುವಂತಹ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://karnemakaone.kar.nic.in/abcd/ApplicationForm_JA_org.aspx
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಸರಕಾರಿ ಉದ್ಯೋಗಗಳ ಸಂಬಂಧಿಸಿದ ಮಾಹಿತಿ ಪಡೆಯಲು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಇತರ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಿ