LG Scholarship 2025: LG ಕಂಪನಿಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ LG ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬರೋಬ್ಬರಿ 1 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಈ ಒಂದು ಸಂಸ್ಥೆಯಿಂದ ನೀಡಲಾಗುತ್ತದೆ ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಒಂದು ಲೇಖನಿ ಮೂಲಕ ತಿಳಿದುಕೊಳ್ಳೋಣ
LG ಸ್ಕಾಲರ್ಶಿಪ್ ಯೋಜನೆ (LG Scholarship 2025)..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಲವಾರು ಪ್ರೈವೇಟ್ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಇದೀಗ ಸ್ಕಾಲರ್ಶಿಪ್ ನೀಡುತ್ತಿವೆ ಅಂತ ಸಂಸ್ಥೆಗಳಲ್ಲಿ ಒಂದಾದಂತ ಲ್ಗ್ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ Life’s Good ಎಂಬ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಇದೀಗ ಸ್ಕಾಲರ್ಶಿಪ್ ನೀಡುತ್ತಿದೆ.!
ಆದ್ದರಿಂದ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಬರೋಬ್ಬರಿ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು LG ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಿಂದ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಈಗ ತಿಳಿದುಕೊಳ್ಳೋಣ
ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ತಕ್ಷಣ ಈ ಮಾಹಿತಿ ಓದಿ
ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ ..?
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಮೆಟ್ರಿಕ್ ನಂತರದ ವಿದ್ಯಾಭ್ಯಾಸವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಅಂದರೆ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಡಿಪ್ಲೋಮೋ ಹಾಗೂ ಎಲೆಕ್ಟ್ರಾನಿಕ್ಸ್ ಹಾಗೂ ಇಂಜಿನಿಯರಿಂಗ್ ಮತ್ತು ಐಟಿಐ ವಿಭಾಗದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
- ಪದವಿ ವಿದ್ಯಾರ್ಥಿಗಳಿಗೆ:- ₹50,000 ವಿದ್ಯಾರ್ಥಿ ವೇತನ
- ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ:- ₹1,00,000
ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (LG Scholarship 2025).?
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತದ ಪ್ರಜೆಯಾಗಿರಬೇಕು
- LG ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರಬೇಕು
- ಈ ಒಂದು ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂಪಾಯಿ ಮೀರಬಾರದು
- LG ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಅಥವಾ ಇಂದಿನ ಸೆಮಿಸ್ಟರ್ ನಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ದಿನಾಂಕ 31 ಜನವರಿ 2025 ರ ಒಳಗಡೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.buddy4study.com/page/life-s-good-scholarship-program
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕನ ಮೇಲೆ ಕ್ಲಿಕ್ ಮಾಡಿ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಿ ಇದರಿಂದ ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ