PM Vishwakarma: ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ 15,000 ಹಣ & 3 ಲಕ್ಷ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಸಿಗುತ್ತೆ.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಮೋದಿ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ಉಚಿತವಾಗಿ 15000 ಹಣ ಪಡೆದುಕೊಳ್ಳಬಹುದು ಜೊತೆಗೆ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಈ ಒಂದು ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಪಿಎಂ ವಿಶ್ವಕರ್ಮ ಯೋಜನೆ (PM Vishwakarma)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಉಚಿತವಾಗಿ 15 ಸಾವಿರ ಹಾಗೂ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಈ ಯೋಜನೆ ಅಡಿಯಲ್ಲಿ ನೀಡಲಾಗುತ್ತಿದೆ ಆದ್ದರಿಂದ ಪ್ರತಿಯೊಬ್ಬರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಿರಿ..! ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ 3 ಲಕ್ಷ ರೂಪಾಯಿ ವರೆಗೆ ಕೇವಲ 5% ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಅವಧಿಸಲಾಗುತ್ತಿದೆ
ಪಿಎಂ ವಿಶ್ವಕರ್ಮ ಯೋಜನೆಯನ್ನು ಕೇಂದ್ರ ಸರ್ಕಾರವು ಕರಕುಶಲ ಕಾರ್ಮಿಕರಿಗೆ ಹಾಗೂ ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರುವಂತಹ ಜನರಿಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಹಾಗಾಗಿ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ 15,000 ಹಣ ಹಾಗೂ ಇನ್ನೂ ಸಾಕಷ್ಟು ಈ ಯೋಜನೆಯಿಂದ ಲಾಭ ಪಡೆಯಬಹುದು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಪಿಎಂ ವಿಶ್ವಕರ್ಮ ಯೋಜನೆಯ ಲಾಭಗಳು (PM Vishwakarma)..?
ಉಚಿತವಾಗಿ ಸಿಗುತ್ತೆ 15000 ಹಣ:- ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಪ್ರತಿಯೊಬ್ಬ ಫಲಾನುಭವಿಗಳಿಗೆ 15000 ಹಣವನ್ನು ಉಚಿತವಾಗಿ ನೀಡಲಾಗುತ್ತಿದೆ.! ಹೌದು ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಕೌಶಲ್ಯ ತರಬೇತಿ ಪೂರ್ಣಗೊಂಡ ನಂತರ ತಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಯಂತ್ರೋಪಕರಣಗಳ ಖರೀದಿಗಾಗಿ ಉಚಿತವಾಗಿ 15000 ಹಣವನ್ನು ಈ ಯೋಜನೆ ಅಡಿಯಲ್ಲಿ ನೀಡುತ್ತಿದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆ ಲಾಭ ಪಡೆಯಿರಿ
ಕೌಶಲ್ಯ ತರಬೇತಿ:- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ.! ಹೌದು ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಉದ್ಯೋಗಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿ ಹಾಗೂ ಯಾವ ರೀತಿ ತಮ್ಮ ಉದ್ಯೋಗವನ್ನು ಆಧುನಿಕರಣ ಗೊಳಿಸಬೇಕು ಮತ್ತು ಲಾಭದಾಯಕ ಮಾಡಬೇಕು ಎಂಬ ಮಾಹಿತಿಯನ್ನು ಈ ಒಂದು ಕೌಶಲ್ಯ ತರಬೇತಿಗಳಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ನೀಡಲಾಗುತ್ತದೆ.! ಇದರ ಜೊತೆಗೆ ಏಳು ದಿನಗಳ ಕಾಲ ಈ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು ಮತ್ತು ಏಳು ದಿನಗಳಿಗೆ 3500 ಹಣವನ್ನು ಕೂಲಿ ರೂಪದಲ್ಲಿ ಅರ್ಜಿದಾರರಿಗೆ ನೀಡಲಾಗುತ್ತದೆ
3 ಲಕ್ಷ ರೂಪಾಯಿ ಸಾಲ ಸೌಲಭ್ಯ:- ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಕೇಬಲ 5% ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ.! ಸ್ನೇಹಿತರೆ ಆರಂಭಿಕವಾಗಿ 1 ಲಕ್ಷ ರೂಪಾಯಿ ಸಾಲ ನೀಡಲಾಗುತ್ತದೆ ನಂತರ ಈ ಸಾಲದ ಮರುಪಾವತಿ ಅವಧಿ ಮುಗಿದ ನಂತರ ಎರಡು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ ಒಟ್ಟು ಈ ಒಂದು ಯೋಜನೆ ಅಡಿಯಲ್ಲಿ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಸ್ವಂತ ಉದ್ಯೋಗಕ್ಕಾಗಿ ಅಥವಾ ತಾವು ಮಾಡುತ್ತಿರುವ ಉದ್ಯೋಗವನ್ನು ಆಧುನಿಕರಣ ಗೊಳಿಸಲು ಮೂರು ಲಕ್ಷ ರೂಪಾಯಿವರೆಗೆ ಶೇಕಡ ಐದರಷ್ಟು ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಸಿಗುತ್ತದೆ
ಪಿಎಂ ವಿಶ್ವಕರ್ಮ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?
- ಶಿಲ್ಪಿಗಳು
- ಟೈಲರಿಂಗ್ ಮಾಡುವವರು
- ಕ್ಷೌರಿಕರು
- ಬೊಂಬೆ ತಯಾರು ಮಾಡುವವರು
- ಮಡಿವಾಳರು
- ಬಡಿಗೇರರು
- ಕೈಯಿಂದ ಪಾದ ರಕ್ಷೆ ಮಾಡುವವರು
- ಅಕ್ಕಸಾಲಿಗರು
- ದೋಣಿ ತಯಾರುಕರು.
- ಮೀನುಗಾರರು
- ಕುಲುಮೆ ಮಾಡುವವರು
- ಹೂ ಮಾರುವವರು
- ಕುಂಬಾರರು
- ಕಲ್ಲುಕುಟಿಕರು
- ಇತರರು
ತಿಳಿಸಿದಂತ ವರ್ಗಕ್ಕೆ ಸೇರಿದಂತ ಜನರು ಹಾಗೂ ಇತರ 350 ಕ್ಕಿಂತ ಹೆಚ್ಚು ಸಣ್ಣಪುಟ್ಟ ಉದ್ಯೋಗ ಮಾಡುತ್ತಿರುವವರು ಹಾಗೂ ಸ್ವಂತ ಉದ್ಯೋಗ ಮಾಡುತ್ತಿರುವವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಯಸ್ಸು 18 ವರ್ಷ ಮೇಲ್ಪಟ್ಟು ಹಾಗೂ 59 ವರ್ಷದ ಒಳಗಿನವರು ಅರ್ಜಿ ಸಲ್ಲಿಸಲು ಅವಕಾಶವಿದೆ
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಮೀರಬಾರದು
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿದೆ
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರೋ ಭಾರತದ ಪ್ರಜೆಯಾಗಿರಬೇಕು
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಕುಟುಂಬದಲ್ಲಿ ಯಾವುದೇ ರೀತಿ ಸರ್ಕಾರಿ ನೌಕರಿ ಹೊಂದಿರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು.?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಉದ್ಯೋಗ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತರ ಅಗತ್ಯ ದಾಖಲಾತಿಗಳು
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೇಲೆ ತಿಳಿಸಿದಂತ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ನೀವು ಕೆಳಗಡೆ ಕೊಟ್ಟಿರುವಂಥ ಲಿಂಕಿನ ಮೇಲೆ ಕ್ಲಿಕ್ ಮಾಡಿ ಈ ಯೋಜನೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಬಹುದು
ಹೆಚ್ಚಿನ ವಿವರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಜಾಯಿನ್ ಆಗಬಹುದು