Uchitha Holige Yantra: ಉಚಿತ ಹೊಲಿಗೆ ಯಂತ್ರ ವಿತರಣೆ.! ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದೆ ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಈ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಈ ಒಂದು ಲೇಖನೆಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನನ್ನು ಕೊನೆವರೆಗೂ ಓದಿ
ಉಚಿತ ಹೊಲಿಗೆ ಯಂತ್ರ ವಿತರಣೆ (Uchitha Holige Yantra)..?
ಹೌದು ಸ್ನೇಹಿತರೆ ಮಹಿಳೆಯರಿಗೆ ಸ್ವವಲಂಬನೆ ಜೀವನ ನಡೆಸಲು ಹಾಗೂ ಸ್ವಾವಲಂಬನೆ ಜೀವನ ಕಟ್ಟಿಕೊಳ್ಳಲು ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಇರುವಂತಹ ಮಹಿಳೆಯರಿಗೆ ನಮ್ಮ ರಾಜ್ಯ ಸರ್ಕಾರ ಗ್ರಾಮೀಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಗುತ್ತಿದೆ ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವಂತ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢರಾಗಿ ಮಾಡಲು ಹಾಗೂ ಆರ್ಥಿಕವಾಗಿ ಸ್ವಾವಲಂಬನೆಯಾಗಿ ಮಾಡುವ ಉದ್ದೇಶದಿಂದ ಹಾಗೂ ಸ್ವಉದ್ಯೋಗವನ್ನು ಆರಂಭಿಸಲು ಪ್ರತಿ ವರ್ಷ ಗ್ರಾಮೀಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಡೆಯಿಂದ ಮಹಿಳೆಯರಿಗೆ ಸುಧಾರಿತ ಟೈಲರಿಂಗ್ ಮಷೀನ್ ಅಥವಾ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಆದರಿಂದ ನೀವು ಈ ಒಂದು ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ ಹಾಗಾದ್ರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲಿರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Uchitha Holige Yantra)..?
- ಅರ್ಜಿ ಸಲ್ಲಿಸುವ ಮಹಿಳೆಯರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
- ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 55 ವರ್ಷದ ಒಳಗಡೆ ಇರಬೇಕು
- ಅರ್ಜಿ ಸಲ್ಲಿಸಲು ಬಯಸುವ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿರುವ ಮಹಿಳೆಯರಿಗೆ 98 ಸಾವಿರ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಇರುವ ಮಹಿಳೆಯರಿಗೆ 1,20,000 ಒಳಗಡೆ ಇರಬೇಕು
- ಅರ್ಜಿ ಸಲ್ಲಿಸಲು ಬಯಸುವ ಮಹಿಳೆ ಈ ಹಿಂದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಯಾವುದೇ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆದಿರಬಾರದು
- ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯು ಹಿಂದುಳಿದ ವರ್ಗದ ಮಹಿಳೆಯಾಗಿರಬೇಕು
- ಹೊಲಿಗೆ ಯಂತ್ರ ಪಡೆಯಲು ಬಯಸುವ ಮಹಿಳೆಯ ಕುಟುಂಬದಲ್ಲಿ ಯಾವುದೇ ರೀತಿ ಸರಕಾರಿ ನೌಕರಿ ಹೊಂದಿದ ಸದಸ್ಯರು ಇರಬಾರದು
ಅರ್ಜಿ ಸಲ್ಲಿಸ ಬೇಕಾಗುವ ದಾಖಲಾತಿಗಳು..?
- ಅರ್ಜಿದಾರರ ಫೋಟೋ
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಜನ್ಮ ದಿನಾಂಕ ಪ್ರಮಾಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ವೋಟರ್ ಐಡಿ
- ವೃತ್ತಿ ಮಾಡುತ್ತಿರುವ ಬಗ್ಗೆ ಪಂಚಾಯತಿಯಿಂದ ಪಡೆದ ವೃತ್ತಿ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬಯಸುವಂಥ ಮಹಿಳೆಯರು ಈ ಮೇಲೆ ತಿಳಿಸಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಸೇವಾ ಪೋರ್ಟಲ್ ಮೂಲಕ ಈ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://sevasindhuservices.karnataka.gov.in/
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆಯಲು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಇತರ ಪ್ರತಿಯೊಂದು ಮಾಹಿತಿಯನ್ನು ಬೇಗ ಹಾಗೂ ಪ್ರತಿದಿನ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಜಾಯಿನ್ ಆಗಬಹುದು